ಮೂಡುಬಿದಿರೆ: ಮಿಜಾರು ಸುತ್ತಮುತ್ತಲಿನ ಸರ್ಕಾರಿ ಹಾಗೂ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಆಳ್ವಾಸ್ ಇಂಜಿನಿಯರಿಂಗ್‍ನ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳು ವೈಜ್ಞಾನಿಕ ತತ್ವ ಸಿದ್ದಾಂತ ಆಧಾರಿತ ವಿಜ್ಞಾನದ ಮಾದರಿಗಳನ್ನು ತಯಾರಿಸಿ ಅವುಗಳ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಮಿಜಾರಿನಲ್ಲಿರುವ ಆಳ್ವಾಸ್ ಕ್ಯಾಂಪಸ್‍ನಲ್ಲಿ ಹಮ್ಮಿಕೊಳ್ಳಲಾಯಿತು.

scl-2

ಕಾರ್ಯಕ್ರಮವನ್ನು ಉದ್ಘಾಟಿಸಿದ ಟ್ರಸ್ಟಿ ವಿವೇಕ್ ಆಳ್ವರವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಶಾಲಾ ಮಕ್ಕಳನ್ನೂ ಉದ್ದೇಶಿಸಿ ಮಾತನಾಡಿ, ಪ್ರಸಕ್ತ ಸನ್ನಿವೇಶಕ್ಕೆ ತಕ್ಕ ಹಾಗೆ ವಿಜ್ಞಾನದಲ್ಲಿ ಆಗುತ್ತಿರುವ ಬಲಾವಣೆ ಹಾಗೂ ಮೌಡ್ಯತೆಯ ಬಗ್ಗೆ ಜಾಗೃತರಾಗಬೇಕು ಮತ್ತು ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಕನಸು ಕಟ್ಟುವ ಕೆಲಸಕ್ಕೆ ನೆರವಾಗಬೇಕು ಎಂದರು.

scl

ಪ್ರದರ್ಶನದ ಮಾದರಿಗಳನ್ನು ಪರಿಸರದಲ್ಲಿ ಸಾಮಾನ್ಯವಾಗಿ ಸಿಗುವ ಕಚ್ಚಾ ವಸ್ತುಗಳನ್ನು ಬಳಕೆ ಮಾಡಿ ಸಿದ್ದಪಡಿಸಿದ್ದರು. ಈ ಪ್ರದರ್ಶನವು ಶಾಲಾ ಮಕ್ಕಳಲ್ಲಿ ತಾಂತ್ರಿಕತೆಯ ಅರಿವು ಮೂಡಿಸಿತು.

ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫರ್ನಾಂಡಿಸ್, ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ.ಶಂಕರಗೌಡ ನ್ಯಾಮಣ್ಣನವರ್, ಸಂಯೋಜಕ ಪ್ರೊ. ಯೋಗೇಶ್ ರಾವ್, ಕುಮಾರಸ್ವಾಮಿ ಎಂ.ಸಿ.ಶ್ರೀವಾಸ್, ಮಿಥುನ್ ಬಿ ಆರ್ ಮತ್ತು ವಿದ್ಯಾರ್ಥಿ ಸಂಯೋಜಕ ಪವನ್ ಕುಮಾರ್, ಮದನ್, ದೇವಿಪ್ರಸಾದ್ ಶೆಟ್ಟಿ ಕಾರ್ಯಕ್ರಮದಲ್ಲಿ ಹಾಜರಿದ್ದರು.

By suddi9

Leave a Reply

Your email address will not be published. Required fields are marked *