ಕೈಕಂಬ: ಊರು ಮತ್ತು ಶಾಲೆಗಳ ನಡುವೆ ಅವಿನಾಭಾವ ಸಂಬಂಧ ಇದೆ. ಒಂದರ ಸ್ಥಿತಿ, ಇನ್ನೊಂದರ ಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಶಾಲೆ ಉತ್ತಮ ಸ್ಥಿತಿಯಲ್ಲಿದ್ದರೆ, ಅದು ಊರಿನ ಮತ್ತು ಸಮುದಾಯದ ಸಹಕಾರದಿಂದ ಸಾಧ್ಯವಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನುಡಿದರು.
ಅವರು ಪೊಳಲಿ ಶ್ರೀ ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆಯಲ್ಲಿ ಡಿ.17ರಂದು ಜರುಗಿದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಶ್ರೀ ರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತ್ಯಾನಂದ ಸ್ವಾಮೀಜಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.



ಈ ಸಂದರ್ಭ ಶಾಲೆಯಲ್ಲಿ ಹತ್ತು ವರ್ಷಗಳಲ್ಲಿ ವಿಶೇಷ ಸಾಧನೆ ತೋರಿದ ಮಕ್ಕಳನ್ನು ಮತ್ತು ಶಾಲೆಯಲ್ಲಿ ಸೇವೆ ಸಲ್ಲಿಸಿದ ಗೌರವ ಶಿಕ್ಷಕರನ್ನು ಹಾಗೂ ಶಾಲಾ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಜೀಪಮುನ್ನೂರು ಜಿ.ಪಂ ಸದಸ್ಯ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ತಾ.ಪಂ. ಸದಸ್ಯ ಯಶವಂತ ಕೋಟ್ಯಾನ್ , ಕರಿಯಂಗಳ ಗ್ರಾ,ಪಂ ಅಧ್ಯಕ್ಷೆ ಚಂದ್ರಾವತಿ, ಬಂಟ್ವಾಳ ತಾಲೂಕಿನ ಶಿಕ್ಷಣಾಧಿಕಾರಿ ಲೋಕೇಶ್.ಸಿ., ಕರಿಯಂಗಳ ಗ್ರಾ.ಪಂ ಸದಸ್ಯರಾದ ಲೋಕೇಶ್ ಭರಣಿ ಹಾಗೂ ವೀಣಾ ಆಚಾರ್ಯ, ಪೊಳಲಿ ಸ.ಪ್ರೌ.ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪಿ.ಸುಬ್ರಹ್ಮಣ್ಯ ಭಟ್, ವೆಂಕಟೇಶ ನಾವಡ ಪೊಳಲಿ, ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಎಸ್.ಡಿ.ಎಮ್.ಸಿ ಕಾರ್ಯಾಧ್ಯಕ್ಷ ಉಮೇಶ್ ಆಚಾರ್ಯ ಉಪಸ್ಥಿತರಿದ್ದರು. ಸ.ಪ್ರೌ. ಶಾಲಾ ಮುಖ್ಯೋಪಾಧ್ಯಾಯಿನಿ ಉಮಾ ವರದಿ ವಾಚಿಸಿದರು. ಶಾಲಾ ದೈಹಿಕ ಶಿಕ್ಷಕ ಜಯಂತ ಆಚಾರ್ಯ ಸ್ವಾಗತಿಸಿ, ಪೂರ್ಣಿಮಾ ಎಸ್. ಕಾರ್ಯಕ್ರಮ ನಿರೂಪಿಸಿದರು. ರಂಜಿತಾ ರಾಜೀವ್ ಟಿ. ಧನ್ಯದಗೈದರು.
ಚಿತ್ರ: 24 ವಿಪಿ ದಶಮಾನೋತ್ಸವ







