ಮೂಡುಬಿದಿರೆ: ಕೇಂದ್ರ ಸರ್ಕಾರದ ಆಯುಷ್ ಇಲಾಖೆ, ರಾಷ್ಟ್ರೀಯ ಆಯುರ್ವೇದ ಪರಿಷತ್ ಮತ್ತು ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಪಂಚಕರ್ಮ ವಿಭಾಗದ ವತಿಯಿಂದ ಆರು ದಿನಗಳ ಕಾಲ ನಡೆಯುವ ಪಂಚಕರ್ಮ ವೈದ್ಯರ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಸೋಮವಾರ ಆರಂಭವಾಯಿತು.

ayurvedic

ಪ್ರಸಿದ್ಧ ಪಂಚಕರ್ಮ ತಜ್ಞ, ಹುಬ್ಬಳ್ಳಿ ಆಯುರ್ವೇದ ಮಹಾವಿದ್ಯಾಲಯದ ಪ್ರೊ. ಡಾ. ಎ.ಎಸ್. ಪ್ರಶಾಂತ್ ವಿಚಾರ ಸಂಕಿರಣವನ್ನು ಉದ್ಘಾಟಿಸಿದರು. ಪಂಚಕರ್ಮ ಚಿಕಿತ್ಸೆ ಹಲವು ರೋಗಗಳಿಗೆ ರಾಮಭಾಣ. ಹೊಸ ಸಂಶೋಧನೆಗಳು ಹಾಗೂ ರೋಗಿಗೆ ಚಿಕಿತ್ಸೆಯನ್ನು ಪರಿಣಾಮಕಾರಿಯಾಗಿ ನೀಡಲು ಸಹಾಯಕಾರಿಯಾಗುವ ತಾಂತ್ರಿಕತೆಯನ್ನು ಅರಿತುಕೊಳ್ಳಲು ಸಹಕಾರಿಯಾಗಿದೆ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ ಆಳ್ವ ಮಾತನಾಡಿ, ಆಯುರ್ವೇದ, ಪಂಚಕರ್ಮ ಚಿಕಿತ್ಸೆಯನ್ನು ಆಳ್ವಾಸ್ ಆಸ್ಪತ್ರೆಯಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿಸಲು ಯೋಜನೆಗಳನ್ನು ರೂಪಿಸಲಾಗುತ್ತದೆ. ಅನುಭವಿ ವೈದ್ಯರ ಸಹಕಾರ ಅಗತ್ಯ ಎಂದರು.
ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ವಿನಯಚಂದ್ರ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚಕರ್ಮ ವಿಭಾಗದ ಮುಖ್ಯಸ್ಥ ಡಾ. ಪ್ರವೀಣ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಡಾ. ಲೀಮಾ ಮೋಳ್ ಮ್ಯಾಥ್ಯೂ ಕಾರ್ಯಕ್ರಮ ನಿರ್ವಹಿಸಿದರು. ಡಾ. ಕೆ.ಎನ್ ರಾಜಶೇಖರ್ ವಂದಿಸಿದರು. ವಿವಿಧ ರಾಜ್ಯಗಳಿಂದ ಆಯ್ಕೆಯಾದ ಆಯುಷ್ ಸರ್ಕಾರಿ ಆಯುರ್ವೇದ ವೈದ್ಯಧಿಕಾರಿಗಳಿಗೆ ಪಂಚಕರ್ಮ ಚಿಕಿತ್ಸೆಯಲ್ಲಿ ಸಮಗ್ರ ಚಿಕಿತ್ಸೆ ಪ್ರಾಯೋಗಿಕ ಹಾಗೂ ಕೌಶಲಗಳನ್ನು ಬೆಳೆಸಲು ಪೂರಕವಾದ ತರಬೇತಿಯನ್ನು ನೀಡಲಾಗುತ್ತಿದೆ.

By suddi9

Leave a Reply

Your email address will not be published. Required fields are marked *