ಸುದ್ದಿ9ಬಂಟ್ವಾಳ: ದೇಶದಲ್ಲಿ ಜನಸಂಖ್ಯಾ ಸ್ಫೋಟ ಏರುಗತಿಯಲ್ಲಿ ಸಾಗುತ್ತಿದ್ದು, ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ವಿವಿಧ ಬಗೆಯ ಸಮಸ್ಯೆಗಳು ದೇಶದ ಜನತೆಯನ್ನು ಕಾಡಲಿದೆ. ಈ ಬಗ್ಗೆ ಈಗಾಲೇ ಯುವಜನಾಂಗ ಎಚ್ಚೆತ್ತುಕೊಳ್ಳ ಬೇಕಾಗಿದೆ ಎಂದು ಬಂಟ್ವಾಳ ಪುರಸಭೆಯ ಅಧ್ಯಕ್ಷೆ ವಸಂತಿ ಸಿ. ಹೇಳಿದರು.
ದ.ಕ.ಜಿಲ್ಲಾ ಪಂಚಾಯತ್, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಬಂಟ್ವಾಳ, ಸಕರ್ಾರಿ ಪ್ರಥಮದಜರ್ೆ ಕಾಲೇಜು ಹಾಗೂ ಲಯನ್ಸ್ ಕ್ಲಬ್ನ ಜಂಟಿ ಆಶ್ರಯದಲ್ಲಿ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಾಲೂಕು ಪಂಚಾಯತ್ ಅಧ್ಯಕ್ಷ ಯಶವಂತ ದೇರಾಜೆ ಅಧ್ಯಕ್ಷತೆ ವಹಿಸಿದ್ದರು. ಪೆರುವಾಯಿ ಪ್ರಾ.ಆ.ಕೇಂದ್ರದ ವೈದ್ಯಾಧಿಕಾರಿ ಡಾ. ವಿಶ್ವೇಶ್ವರ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿಶ್ವ ಜನಸಂಖ್ಯಾ ದಿನಾಚರಣೆ ಹಾಗೂ ಜನಸಂಖ್ಯಾ ನಿಯಂತ್ರಣದ ಅಗತ್ಯತೆಯ ಬಗ್ಗೆ ಮಾಹಿತಿ ನೀಡಿದರು. ಜಿ.ಪಂ.ಸದಸ್ಯರಾದ ಸಂತೋಷ್ ಕುಮಾರ್ ರೈ, ಚೆನ್ನಪ್ಪ ಕೋಟ್ಯಾನ್, ತಾ.ಪಂ.ಸದಸ್ಯ ದಿನೇಶ್ ಅಮ್ಟೂರು, ಕಾರ್ಯನಿವರ್ಾಹಣಾಧಿಕಾರಿ ಸಿಪ್ರಿಯಾನ್ ಮಿರಾಂಡ, ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ್, ಲಯನ್ಸ್ ಕ್ಲಬ್ ಅಧ್ಯಕ್ಷ ಶಿವಾನಂದ ಬಾಳಿಗಾ, ಎನ್ಎಸ್ಎಸ್ ಅಧಿಕಾರಿ ರೋನಾಲ್ಡ್ ಡಿಸೋಜಾ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಲ್ಲಡ್ಕ ಪ್ರಾ.ಆ.ಕೇಂದ್ರದ ವೈದ್ಯಾಧಿಕಾರಿ ಡಾ. ಸುಜಯ್ ಭಂಡಾರಿ ಸ್ವಾಗತಿಸಿ, ಪ್ರಸ್ತಾವಿಸಿದರು. ಭಾಸ್ಕರ್ ರಾವ್ ನಿರೂಪಿಸಿದರು. ಸಭಾ ಕಾರ್ಯಕ್ರಮಕ್ಕಿಂತ ಮುಂಚಿತವಾಗಿ ಬಿ.ಸಿ.ರೋಡಿನಿಂದ ಸಭಾಂಗಣದವರೆಗೆ ಸಕರ್ಾರಿ ಪ್ರಥಮದಜರ್ೆ ಕಾಲೇಜು ವಿದ್ಯಾಥರ್ಿಗಳಿಂದ ಜಾಗೃತಿ ಜಾಥ ನಡೆಯಿತು. ತಹಶೀಲ್ದಾರ್ ಮಲ್ಲೇಸ್ವಾಮೀ ಜಾಗೃತಿ ಜಾಥಕ್ಕೆ

ಚಾಲನೆ ನೀಡಿದರು.

001

01

1

By suddi9

Leave a Reply

Your email address will not be published. Required fields are marked *