ಮೂಡುಬಿದಿರೆ: ಗುಜರಾತಿನ ವಡೋದರದಲ್ಲಿ ನಡೆದ 62ನೇ ಶಾಲಾ ಅತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಆಳ್ವಾಸ್ ಪ್ರೌಢಶಾಲೆಯ ತಂಡವು 3 ಚಿನ್ನ ಹಾಗೂ 1 ಕಂಚು ಪಡೆದು ಒಟ್ಟು 4 ಪದಕಗಳನ್ನು ಪಡೆದುಕೊಂಡಿದ್ದಾರೆ.
17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಜ್ಯೋತ್ಸ್ನಾ 100ಮೀ, 200ಮೀ ಓಟದಲ್ಲಿ ಚಿನ್ನದ ಪದಕ ಮತ್ತು ರಚನಾ ಆರ್. ಪೋಲ್‍ವಾಲ್ಟ್‍ನಲ್ಲಿ ಕಂಚಿನ ಪದಕ, 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ನಾಗೇಂದ್ರ ಅಣ್ಣಪ್ಪ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

mbd_march2_4
ಕರ್ನಾಟಕಕ್ಕೆ ಏಳು ಪದಕಗಳು ದೊರಕಿದ್ದು ಅದರಲ್ಲಿ 4 ಪದಕಗಳು ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ ಎಂಬುದು ಹೆಮ್ಮೆಯ ವಿಷಯವಾಗಿದ್ದು ವಿಜೇತ ಕ್ರೀಡಾಪಟುಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

By suddi9

Leave a Reply

Your email address will not be published. Required fields are marked *