ಮೂಡುಬಿದಿರೆ: 8ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದ ಸ್ಮರಣ ಪತ್ರಿಕೆ ಬೆಳದಿಂಗಳ ಮಾತು ಅನ್ನು ಮೂಡುಬಿದಿರೆ ಬಸ್ ನಿಲ್ದಾಣದ ಬಳಿಯಿರುವ ಸರ್ಕಾರಿ ಪ್ರಾಥಮಿಕ ಶಾಲೆ(ಲೇಬರ್ ಶಾಲೆ)ಯಲ್ಲಿ ಮಂಗಳವಾರ ಬಿಡುಗಡೆಗೊಳಿಸಲಾಯಿತು.

mbd_march8_2
ಮೂಡುಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್ ಸ್ಮರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.ಕಲಾವಿದ ಸುರೇಂದ್ರ ಹೆಗ್ಡೆ ಅವರು ಸ್ಮರಣ ಪತ್ರಿಕೆಯ ಅಂತರ್ಜಾಲ ಆವೃತ್ತಿಯನ್ನು ಬಿಡುಗಡೆಗೊಳಿಸದರು.
ಸಂಘಟಕ ಬೋಳ ರವಿ ಪೂಜಾರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಎಂ, ರಂಗ ಕಲಾವಿದ ಮಣಿ ಕೋಟೆಬಾಗಿಲು, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಪ್ರಫುಲ್ಲ ಎಂ.ಶೆಟ್ಟಿ ಉಪಸ್ಥಿತರಿದ್ದರು.
ಬೆಳದಿಂಗಳ ಸಾಹಿತ್ಯ ಸಮಿತಿಯ ಅಧ್ಯಕ್ಷ ಶೇಖರ ಅಜೆಕಾರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *