ಬಂಟ್ವಾಳ: ಬಿ.ಸಿ.ರೋಡ್ ಮೇಲ್ಸೇತುವೆ ಅಡಿಯಲ್ಲಿ ಮಂಗಳೂರು ಅಲೋಸಿಯಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಾದಕ ವಸ್ತು ಸೇವಿಸಿ ವಾಹನ ಚಲಾಯಿಸುವ ದುಷ್ಪರಿಣಾಮವನ್ನು ಬಿಂಬಿಸುವ ಬೀದಿ ನಾಟಕ ನಡೆಯಿತು. ಈ ಸಂದರ್ಭದಲ್ಲಿ ಬಂಟ್ವಾಳ ನಗರ ಠಾಣೆಯ ಎಸ್ಸೈ ನಂದಕುಮಾರ್, ಟ್ರಾಫಿಕ್ ಎಸ್ಸೈ ಚಂದ್ರಶೇಖರಯ್ಯ ಹಾಗೂ ಅವರ ಸಿಬ್ಬಂದಿ ಉಪಸ್ಥಿತರಿದ್ದರು.
