ಬಂಟ್ವಾಳ:ಇಲ್ಲಿನ ಸಿದ್ಧಕಟ್ಟೆ ವಿಶ್ವಕರ್ಮ ಯುವಕ ಸಂಘ ಮತ್ತು ಗಾಯತ್ರಿ ಮಹಿಳಾ ಮಂಡಳಿ ಇದರ ವತಿಯಿಂದ ಸಿದ್ಧಕಟ್ಟೆ ಕೇಂದ್ರ ಮೈದಾನದಲ್ಲಿ ಈಚೆಗೆ ಏರ್ಪಡಿಸಿದ್ದ ಪೆರ್ಡೂರು ಮೇಳದ ‘ಪುಷ್ಪಸಿಂಧೂರಿ’ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮದಲ್ಲಿ ಯುವ ಉತ್ಸಾಹಿ ಯಕ್ಷಗಾನ ಭಾಗವತ ಜನ್ಸಾಲೆ ರಾಘವೇಂದ್ರ ಆಚಾರ್ಯ ಮತ್ತು ಹಿರಿಯ ಕಲಾವಿದ ತೀರ್ಥಹಳ್ಳಿ ಗೋಪಾಲ ಆಚಾರ್ಯ ಇವರಿಗೆ ಸನ್ಮಾನ ಮತ್ತು ಬಿರುದು ಪ್ರದಾನ ಕಾರ್ಯಕ್ರಮ ನಡೆಯಿತು.
ಯುವ ಭಾಗವತ ಜನ್ಸಾಲೆ ರಾಘವೇಂದ್ರ ಆಚಾರ್ಯ ಇವರಿಗೆ ‘ಯಕ್ಷ ನಕ್ಷತ್ರ’ ಮತ್ತು ಹಿರಿಯ ಕಲಾವಿದ ತೀರ್ಥಹಳ್ಳಿ ಗೋಪಾಲ ಆಚಾರ್ಯ ಇವರಿಗೆ ‘ಯಕ್ಷ ನಾಟ್ಯಶ್ರೀ’ ಬಿರುದು ನೀಡಿ ಸನ್ಮಾನಿಸಲಾಯಿತು.

19btl-Yaksha
ಪ್ರಗತಿಪರ ಕೃಷಿಕ ಉಳಿಪಾಡಿಗುತ್ತು ರಾಜೇಶ್ ನಾಯ್ಕ್, ಪೂಂಜ ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಲೋಕೇಶ ಶೆಟ್ಟಿ, ಸಂಸ್ಕøತ ವಿದ್ವಾಂಸ ಎನ್.ಆರ್.ದಾಮೋದರ ಶರ್ಮ, ಸಿದ್ಧಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘದ ಅಧ್ಯಕ್ಷ ಗೋಪಾಲ ಬಂಗೇರ, ಸಿದ್ಧಕಟ್ಟೆ ವಿಶ್ವಕರ್ಮ ಯುವಕ ಸಂಘದ ಅಧ್ಯಕ್ಷ ಯೋಗೀಶ್ ಆಚಾರ್ಯ ಎಲ್ಪೇಲು, ಸ್ಥಾಪಕಾಧ್ಯಕ್ಷ ಅಶೋಕ ಆಚಾರ್ಯ, ಕಾರ್ಯದರ್ಶಿ ಹರೀಶ್ ಆಚಾರ್ಯ ರಾಯಿ, ಸಿದ್ಧಕಟ್ಟೆ ಗಾಯತ್ರಿ ಮಹಿಳಾ ಮಂಡಳಿ ಅಧ್ಯಕ್ಷೆ ಶಕುಂತಲಾ ಅಶೋಕ ಆಚಾರ್ಯ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *