ಬಂಟ್ವಾಳ: ಕರಾವಳಿ ಭಾಗದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿರುವ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವನ್ನು ರಾಜ್ಯ ಮಟ್ಟದಲ್ಲಿ ಗುರುತಿಸಿ ಅಭಿನಂದಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎನ್.ರಾಜು ಹೇಳಿದರು.
ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಸಂಘ, ಬಂಟ್ವಾಳ ಪ್ರೆಸ್‍ಕ್ಲಬ್ ಮತ್ತು ರಜತ ವರ್ಷಾಚರಣೆ ಸಮಿತಿ ಬಿ.ಸಿ.ರೋಡ್ ಲಯನ್ಸ್ ಸೇವಾ ಮಂದಿರದಲ್ಲಿ ಮಂಗಳವಾರ ಹಮ್ಮಿಕೊಂಡ ರಜತ ವರ್ಷಾಚರಣೆಯ ಸಮಾರೋಪ ಸಂಭ್ರಮದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು. IMG-20170321-WA0012
ರಾಜ್ಯದಲ್ಲೇ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಮೂರು ಜಿಲ್ಲೆಗಳಲ್ಲಿ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಲವಾರು ಜನಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನಮನ ಗೆದ್ದಿರುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಹೇಳಿದ ಅವರು, ತಾಲೂಕು ಮಟ್ಟದ ಕಾರ್ಯನಿರತ ಪತ್ರಕರ್ತರಿಗೂ ರಾಜ್ಯ ಸರಕಾರ ನೀಡುವ ಸವಲತ್ತುಗಳು ದೊರಕುವ ನಿಟ್ಟಿನಲ್ಲಿ ರಾಜ್ಯ ಸಂಘ ಪ್ರಯತ್ನಿಸಲಿದೆ ಎಂದು ಭರವಸೆ ನೀಡಿದರು.

ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ್ ಶೆಟ್ಟಿ ಬಾಳ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಪ್ರಗತಿಪರ ಕೃಷಿಕ ರಾಜೇಶ್‍ನಾಯಕ್ ಉಳಿಪಾಡಿಗುತ್ತು ಮಾತನಾಡಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಸಂಘದ ಪೂರ್ವಾಧ್ಯಕ್ಷರುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂ.ಕಾ.ನಿ.ಪ.ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ ವಹಿಸಿದ್ದರು. ವೇದಿಕೆಯಲ್ಲಿ ರಜತ ವರ್ಷಾಚರಣೆ ಸಮಿತಿ ಗೌರವಾಧ್ಯಕ್ಷ ಬಾಲಕೃಷ್ಣ ಗಟ್ಟಿ, ಅಧ್ಯಕ್ಷ ಇಬ್ರಾಹೀಂ ಅಡ್ಕಸ್ಥಳ, ಪ್ರೆಸ್‍ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಸಂಚಾಲಕ ವೆಂಕಟೇಶ್ ಬಂಟ್ವಾಳ ಉಪಸ್ಥಿತರಿದ್ದರು.

ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿಪಂ ಸದಸ್ಯರಾದ ಕಮಲಾಕ್ಷಿ ಪೂಜಾರಿ, ಎಂ.ಎಸ್.ಮುಹಮ್ಮದ್, ತುಂಗಪ್ಪ ಬಂಗೇರ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಮುಖ್ಯಾಧಿಕಾರಿ ಸುಧಾಕರ್, ತಾಪಂ ಸದಸ್ಯ ಪ್ರಭಾಕರ್ ಪ್ರಭು, ತಾಪಂ ಮಾಜಿ ಉಪಾಧ್ಯಕ್ಷ ಆನಂದ ಎ. ಶಂಭೂರು, ಲಯನ್ಸ್ ದಾಮೋದರ್, ಸಾಮಾಜಿಕ ಕಾರ್ಯಕರ್ತ ಹರಿಕೃಷ್ಣ ಬಂಟ್ವಾಳ, ಬಂಟ್ವಾಳ ತಾಲೂಕು ಕಸಪ ಮಾಜಿ ಅಧ್ಯಕ್ಷ ಬಿ.ತಮ್ಮಯ್ಯ ಮೊದಲಾದ ಗಣ್ಯರು ಭಾಗವಹಿಸಿದರು.
ರಜತ ವರ್ಷಾಚರಣೆ ಸಮಿತಿ ಸಂಚಾಲಕ ಹರೀಶ್ ಮಾಂಬಾಡಿ ಸ್ವಾಗತಿಸಿದರು. ಪತ್ರಕರ್ತ ರಮೇಶ್ ಕೆ. ಪುಣಚ್ಚ ವಂದಿಸಿದರು. ಪತ್ರಕರ್ತ ರತ್ನದೇವ್ ಪುಂಜಾಲಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *