ಬಂಟ್ವಾಳ:ತಾಲ್ಲೂಕಿನ ಕುಕ್ಕಿಪಾಡಿ ಗ್ರಾಮದ ಹಲಾಯಿ ಎಂಬಲ್ಲಿ ಕಳೆದ ಸೋಮವಾರ ರಾತ್ರಿ ವಿದ್ಯುತ್ ತಂತಿ ಸ್ಪರ್ಶಿಸಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ದಿವಂಗತ ಜಿನ್ನಪ್ಪ ಪೂಜಾರಿ ಎಂಬವರ ಪುತ್ರ ವಸಂತ ಪೂಜಾರಿ (35) ಎಂದು ಗುರುತಿಸಲಾಗಿದೆ. ಮೃತರಿಗೆ ಪತ್ನಿ ಮತ್ತು ಒಂದು ವರ್ಷ ಹರೆಯದ ಪುಟ್ಟ ಹೆಣ್ಣು ಮಗು ಇದೆ. ಕಳೆದ ಸೋಮವಾರ ರಾತ್ರಿ ಹಲಾಯಿ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದ ವೇಳೆ ಅವರು ವಿದ್ಯುತ್ ಪರಿವರ್ತಕ ಬಳಿ ಹೋಗಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಗಂಭೀರ ಗಾಯಗೊಂಡು ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.

IMG-20170421-WA0007 (1)

ತಕ್ಷಣವೇ ಸ್ಥಳೀಯರು ಧಾವಿಸಿ ಬಂದು 108 ಆಂಬುಲೆನ್ಸ್ ಮೂಲಕ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಗುರುವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದು, ಮೃತರ ಅಂತ್ಯಕ್ರಿಯೆ ಶುಕ್ರವಾರ ಬೆಳಿಗ್ಗೆ ಹಲಾಯಿ ಮನೆ ಸಮೀಪದಲ್ಲಿ ನಡೆಯಲಿದೆ ಎಂದು ಮೃತರ ಸಂಬಂಧಿಕರು ತಿಳಿಸಿದ್ದಾರೆ.
ಮೃತರು ಕಳೆದ ಹಲವು ವರ್ಷಗಳಿಂದ ರಾಯಿ, ಕುಕ್ಕಿಪಾಡಿ ಮತ್ತು ವಾಮದಪದವು ಪ್ರದೇಶದಲ್ಲಿ ಟೈಲರ್ ವೃತ್ತಿ ಮೂಲಕ ಜನ ಮೆಚ್ಚುಗೆ ಗಳಿಸಿದ್ದರು.

By suddi9

Leave a Reply

Your email address will not be published. Required fields are marked *