ವಿಟ್ಲ: ವಿಟ್ಲದ ವಿಠಲ ವಿದ್ಯಾ ಸಂಘದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ 2017-18 ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಸಂಘದ ಕೋಶಾಧಿಕಾರಿ ನಿತ್ಯಾನಂದ ನಾಯಕ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಯಶವಂತ ವಿಟ್ಲ ಎಲ್ಲಾ ಉಪನ್ಯಾಸಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.