ಮಂಗಳೂರು: ಕರ್ನಾಟಕ ರಾಜ್ಯ ಜಿಲ್ಲಾ ದೈಹಿಕ ಶಿಕ್ಷಕರ ಸಂಘ ದ.ಕ ಮತ್ತು ದ. ಕ ಜಿಲ್ಲಾಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಮಂಗಳೂರು ಇವರ ವತಿಯಿಂದ ಇತ್ತೀಚೆಗೆ ಅನಾರೋಗ್ಯದಿಂದ ನಿಧನ ಹೊಂದಿದ ಉಪ ನಿರ್ದೇಶಕರ ಕಛೇರಿಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೇಶವ ಕೆ ಬಿ ಯವರ ನಿಧನದ ಬಗ್ಗೆ ಸಂತಾಪಕ ಸೂಚಕ ಸಭೆಯು ಕೆನರಾ ಪ್ರೌಢ ಶಾಲೆ ಉರ್ವ ಮಂಗಳೂರು ಇಲ್ಲಿ ಜರಗಿತು.
ಜಿಲ್ಲಾ ಉಪನಿರ್ದೇಶಕರಾದ ವಾಲ್ಟರ್ ಡಿ ಮೆಲ್ಲೋ ಇವರು ಮೃತರ ಭಾವ ಚಿತ್ರಕ್ಕೆ ಪುಶ್ಪ ನಮನ ಸಲ್ಲಿಸಿ ಅವರ ಆದರ್ಶ ಗುಣಗಳನ್ನು ಕೊಂಡಾಡಿ ಒಬ್ಬ ನಿಷ್ಠಾವಂತ ಮತ್ತು ಪ್ರಾಮಾಣಿಕ ಅಧಿಕಾರಿಯನ್ನು ನಮ್ಮ ಜಿಲ್ಲೆ ಕಳೆದುಕೊಂಡಿದೆ, ಜಿಲ್ಲೆಯ ಎಲ್ಲಾ ಶಾಲೆಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಂಡು ಜಿಲ್ಲೆಯ ಕ್ರೀಡಾಪಟುಗಳು, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಮಿಂಚುವಂತೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ನುಡಿದು ಮೃತರಿಗೆ ಸಂತಾಪ ಸಲ್ಲಿಸಿದರು. ಮಂಗಳೂರು ಉತ್ತರದ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಎಸ್ ಡಿ ಎಂ ಮಂಗಳಜ್ಯೋತಿ ಶಾಲಾ ಅಡಳಿತಾಧಿಕಾರಿ ಗಣೇಶ್ ಭಟ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಗುರುನಾಥ ಬಾಗೇವಾಡಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೆ ಹೆಚ್ ನಾಯಕ್, ಕಾರ್ಯದರ್ಶಿ ಶೇಖರ್ ಕಡ್ತಲ, ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಲಿಲ್ಲಿ ಪಾಯಸ್, ಮಂಗಳೂರು ಉತ್ತರ ಸಂಘದ ಅಧ್ಯಕ್ಷ ಹರೀಶ್ ರೈ ಇವರುಗಳು ಮೃತರ ಬಗ್ಗೆ ಸಂತಾಪ ಸಲ್ಲಿಸಿ ನುಡಿನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮೃತರ ಮಕ್ಕಳಾದ ಆದರ್ಶ್ ಮತ್ತು ವರುಣ್ ಉಪಸ್ಥಿತರಿದ್ದರು. ಕ್ರೀಡಾ ಭಾರತಿ ಅಧ್ಯಕ್ಷ ಕಾರ್ಯಪ್ಪ ರೈ, ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗೋಪಾಲ್, ಜಿಲ್ಲಾ ಸಂಘದ ಗೌರವಾಧ್ಯಕ್ಷ ಗಂಗಾಧರ್ ರೈ, ಕೆನರಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಅರುಣಾ ಕುಮಾರಿ, ಜಿಲ್ಲೆಯ ಎಲ್ಲಾ ವಲಯಗಳ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳು, ತಾಲೂಕು ಸಂಘದ ಪದಾಧಿಕಾರಿಗಳು, ಶಾಲಾ ಮುಖ್ಯಸ್ಥರು, ಇಲಾಖಾ ಅಧಿಕಾರಿಗಳು ಮತ್ತು ಅಪಾರ ಸಂಖ್ಯೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಸಭೆಯಲ್ಲಿ ಉಪಸ್ಥಿತರಿದ್ದರು. ಬೆಳ್ತಂಗಡಿ ತಾಲೂಕು ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಜೈನ್ ನಿರೂಪಿಸಿದರು.