ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್ ಕೈಕಂಬದ ರಾಜ ರಸ್ತೆಯಲ್ಲಿ ಮಳೆ ನೀರು ತುಂಬಿರುವುದರಿಂದ ಶನಿವಾರ ಬೆಳಗ್ಗೆಯಿಂದ ವಾಹನಗಳ ಸಂಚಾರಕ್ಕೆ ಅಡಚನೆ ಉಂಟಾಗಿದೆ. ಬಿ.ಸಿ.ರೋಡ್ ಸಹಿತ ಬಂಟ್ವಾಳ ತಾಲೂಕಿನಾದ್ಯಂತ ಶುಕ್ರವಾರ ರಾತ್ರಿಯಿಂದ ಭಾರೀ ಮಳೆಯಾಗಿದ್ದು ಚರಂಡಿ ವ್ಯವಸ್ಥೆ ಇಲ್ಲದ ಪ್ರದೇಶದಲ್ಲಿ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿರುವ ದೃಶ್ಯಗಳು ಕಂಡು ಬರುತ್ತಿದೆ. ಇನ್ನು ಕೆಲವು ಕಡೆಗಳಲ್ಲಿ ಮಳೆ ನೀರು ಹರಿಯಲಾಗದೆ ರಸ್ತೆಯಲ್ಲೇ ನಿಂತುಕೊಂಡಿದೆ.1 (1)

ಬಸ್‍ಬೇ ನಿರ್ಮಾಣಕ್ಕೆಂದು ಕೈಕಂಬ ರಸ್ತೆ ಬದಿಯಲ್ಲಿ ಅಗೆದಿರುವ ಮಣ್ಣನ್ನು ಇಲ್ಲಿನ ಚರಂಡಿಯ ಮೇಲೆ ರಾಶಿ ಹಾಕಿದ್ದು ಹಾಗೂ ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಮಗ್ರ ಕುಡಿಯುವ ನೀರಿನ ಯೋಜನೆಯ ಪೈಪ್‍ಲೈನ್ ಅಳವಡಿಕೆಯ ಸಂದರ್ಭದಲ್ಲಿ ಚರಂಡಿಗಳು ಮುಚ್ಚಿಹೋಗಿರುವುದರಿಂದ ಕೈಕಂಬದಲ್ಲಿ ಮಳೆ ನೀರು ಹರಿಯದೆ ರಸ್ತೆಯಲ್ಲೇ ಕೊಳದ ಮಾದರಿಯಲ್ಲಿ ತುಂಬಿದೆ.2 (1)

ರಸ್ತೆಯಲ್ಲಿ ಮೊಣಕಾಲಿನವರೆಗೆ ನೀರು ನಿಂತಿರುವ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚನೆ ಉಂಟಾಗಿದೆ. ದ್ವಿಚಕ್ರ ವಾಹನಗಳ ಸವಾರರು ನೀರನ್ನು ದಾಟಿ ಸಂಚಾರಿಸಲು ಪರದಾಡಿದರು. ಹಾಗೆಯೇ ಪಾದಚಾರಿಗಳು, ಶಾಲಾ ಮಕ್ಕಳು ನೀರನ್ನು ದಾಟುತ್ತಿರುವ ಬಂಟ್ವಾಳ ಪುರಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳಿಗೆ ಶಾಪ ಹಾಕುತ್ತಿದ್ದ ದೃಶ್ಯಗಳು ಕಂಡು ಬಂದವು.

3 (1)

By suddi9

Leave a Reply

Your email address will not be published. Required fields are marked *