ಬಂಟ್ವಾಳ: ಮಕ್ಕಳ ಆರೋಗ್ಯ ಮತ್ತು ಬುದ್ದಿಯ ವಿಕಸನಕ್ಕೆ ಅಂಗನವಾಡಿ ಕೇಂದ್ರಗಳ ಪಾತ್ರ ಮಹತ್ವದ್ದಾಗಿದ್ದು ಅಂಗನವಾಡಿಯಿಂದಲೇ ಮಕ್ಕಳ ಸರ್ವಾಂಗಿಣ ಬೆಳವಣಿಗೆ ಆರಂಭವಾಗುತ್ತದೆ. ಮಕ್ಕಳು ಆರೋಗ್ಯವಂತಾಗಿರಲು ಸರಕಾರ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಿಸುವಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಶನಿವಾರ ಬಂಟ್ವಾಳ ತಾಲೂಕಿನ ಗೋಳಿನೆಲ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಜಿಲ್ಲಾ ಮಟ್ಟದ ಮೊಟ್ಟೆ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.3

2

4
ಅಂಗನವಾಡಿ ಪೌಷ್ಟಿಕ ಆಹಾರ ಕೊಡುವ ಕೇಂದ್ರವಾಗಿದೆ. ಬಡವರ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗುವುದಿಲ್ಲ ಎಂಬ ಕಾರಣಕ್ಕಾಗಿ ಸರಕಾರ ಮೊಟ್ಟೆ ಮತ್ತು ಹಾಲು ಕೊಡುವಂತ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಮಕ್ಕಳು ಆರೋಗ್ಯವಂತಾಗಿದ್ದರೆ ಪೋಷಕರು ಕೂಡಾ ಆರೋಗ್ಯವಂತರಾಗಿರುತ್ತಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪುರಸಭಾಧ್ಯಕ್ಷ ರಾಮಾಕೃಷ್ಣ ಆಳ್ವ, ಸದಸ್ಯರಾದ ಮುಹಮ್ಮದ್ ಶರೀಫ್, ಮುಮ್ತಾಝ್, ಬಾಲ ವಿಕಸನ ಸಮಿತಿ ಸದಸ್ಯ ಪುಷ್ಪರಾಜ್ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸುಂದರ ಪೂಜಾರಿ, ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ, ಉದ್ಯಮಿ ಸ್ಟ್ಯಾನಿ ಲೋಬೊ, ಅಂಗನವಾಡಿ ಶಿಕ್ಷಕಿಯರಾದ ಲಲಿತ ಮತ್ತು ಸುಜಾತ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *