ಬಂಟ್ವಾಳ : ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್ ಇದರ ವತಿಯಿಂದ ರಾಷ್ಟ್ರದ ಅತ್ಯುನ್ನತ ಸೇವೆಗಳಲ್ಲೊಂದಾದ ಯುಪಿಎಸ್‍ಸಿ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 37ನೇ ರ್ಯಾಂಕ್ ಗಳಿಸಿದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಉಮೇಶ್ ಭಟ್ ರವರ ಪುತ್ರ  ನವೀನ್ ಭಟ್ ರವರನ್ನು ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್ ಸನ್ಮಾನಿಸಿದರು.KAR_6018

ಈ ಸಂದರ್ಭದಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ನಂದಾವರ, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನವೇದ್ ಅಖ್ತರ್, ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಜೋರ ಪಂಜಿಕಲ್, ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ , ಸಂಶೀರ್ ಶಾಂತಿ ಅಂಗಡಿ, ರಾಫಿ ಪಡೀಲ್, ರಿಯಾಝ್ ನೆಹರುನಗರ, ಇರ್ಫಾನ್ ನೆಹರುನಗರ ಮೊದಲಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *