ಬಂಟ್ವಾಳ:ಇಲ್ಲಿನ ಪ್ರವಾಸಿ ಮಂದಿರಕ್ಕೆ ಶನಿವಾರ ರಾತ್ರಿ ಎಸ್ಪಿ ಭೂಷಣ್ ಜಿ.ಬೊರಸೆ ಅವರನ್ನು ಕರೆಸಿಕೊಂಡಿದ್ದ ಸಚಿವ ಬಿ.ರಮಾನಾಥ ರೈ ಅವರು ಕೆಲವೊಂದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕ್ರಿಮಿನಲ್ ವ್ಯಕ್ತಿಗಳ ಸಮ್ಮುಖದಲ್ಲಿ ಪೊಲೀಸ್ ಅಧಿಕಾರಿಗೆ ಒತ್ತಡ ಹೇರಿಕೆ ಮತ್ತು ಅಧಿಕಾರ ದುರುಪಯೋಗಪಡಿಸಿರುವುದು ಬಯಲಾಗಿದೆ. ಇದಕ್ಕಾಗಿ ಅವರು ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಆರ್‍ಎಸ್‍ಎಸ್ ಮುಖಂಡ ಡಾ.ಕೆ.ಪ್ರಭಾಕರ್ ಭಟ್ ಕಲ್ಲಡ್ಕ ಇವರನ್ನು ಬಂಧಿಸಿ 307 ಕೇಸು ದಾಖಲಿಸಿಸಲು ಎಸ್ಪಿಗೆ ಒತ್ತಡ ಹೇರಿದ್ದಾರೆ. ಆ ಬಳಿಕ ಅವರನ್ನು ಜೈಲಿನಿಂದ ಹೊರ ಬಾರದಂತೆ ನೋಡಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ. ಕಲ್ಲಡ್ಕ ಶ್ರೀರಾಮ ಮಂದಿರವೊಂದು ವ್ಯವಹಾರ ಕೇಂದ್ರ ಎಂದು ಅವಹೇಳನ ಮಾಡಿದ್ದಾರೆ. ನೇತ್ರಾವತಿ ನದಿ ಹೋರಾಟಗಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದು ಸೇರಿದಂತೆ ಪೊಲೀಸ್ ಇಲಾಖೆಯಲ್ಲಿ ಆರ್‍ಎಸ್‍ಎಸ್ ಹಿನ್ನೆಲೆ ಹೊಂದಿರುವ ಸಿಬ್ಬಂದಿಗಳನ್ನು ತೆರವುಗೊಳಿಸದಿರುವ ಬಗ್ಗೆ ಐಎಎಸ್ ಅಧಿಕಾರಿ ಜೊತೆಗೆ ಏಕವಚನದಲ್ಲಿ ಮಾತನಾಡಿ, ಬೇಜವಾಬ್ದಾರಿ ರೀತಿಯಲ್ಲಿ ವರ್ತಿಸಿ ಅಧಿಕಾರ ದುರುಪಯೋಗಪಡಿಸಿದ್ದಾರೆ. ಇದಕ್ಕಾಗಿ ಕೂಡಲೇ ಅವರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಮತ್ತು ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ಆಗ್ರಹಿಸಿದ್ದಾರೆ.

18btl-Police

ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಪೊಲೀಸರು ಆಕರ್ಷಕ ಪಥಸಂಚಲನ ನಡೆಸಿ ನಾಗರಿಕರಲ್ಲಿ ಧೈರ್ಯ ತುಂಬುವ ಪ್ರಯತ್ನ ನಡೆಸಿದರು. ಎಸ್ಪಿ ಭೂಷಣ್ ಜಿ.ಬೊರಸೆ, ಹೆಚ್ಚುವರಿ ಎಸ್ಪಿ ವೇದಮೂರ್ತಿ, ಡಿವೈಎಸ್ಪಿ ಭಾಸ್ಕರ ರೈ, ಶ್ರೀನಿವಾಸ್ ಪುತ್ತೂರು, ನಗರ ಠಾಣಾಧಿಕಾರಿ ಎ.ಕೆ.ರಕ್ಷಿತ್ ಗೌಡ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *