ವಿಟ್ಲ: ಕ್ಷೇತ್ರ ಪ್ರಚಾರ ನಿರ್ದೇಶನಾಲಯ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮಂಗಳೂರು, ಕ್ಷೇತ್ರ ಪ್ರಚಾರ ನಿರ್ದೇಶನಾಲಯ ಶಿವಮೊಗ್ಗ, ಶಿಶು ಅಭಿವೃದ್ಧಿ ಯೋಜನಾ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ, ಜಿಲ್ಲಾ ಪಂಚಾಯತ್ ದ ಕ, ತಾಲೂಕು ಪಂಚಾಯತ್ ಬಂಟ್ವಾಳ ಮತ್ತು ಪಟ್ಟಣ ಪಂಚಾಯತ್ ವಿಟ್ಲ ಇದರ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛ ಭಾರತ್ ಅಭಿಯಾನ, ಹೆಣ್ಣು ಮಗು ರಕ್ಷಿಸಿ-ಹೆಣ್ಣು ಮಗುವಿಗೆ ಶಿಕ್ಷಣ ಕೊಡಿಸಿ ಹಾಗೂ ಯೋಗದ ಮಹತ್ವದ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವು ವಿಟ್ಲದ ಮಾದರಿ ಶಾಲೆಯ ಸಭಾ ಭವನದಲ್ಲಿ ನಡೆಯಿತು.SHV_6720

ಈ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಉದ್ಘಾಟಿಸಿ ಸರಕಾರದ ಸವಲ್ಲತ್ತುಗಳ ಬಗ್ಗೆ ವಿವರ ನೀಡಿ, `ರಾಷ್ಟ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳು ಎಲ್ಲರ ಮನೆ ಬಾಗಿಲಿಗೆ ತಲುಪಬೇಕು. ಸರ್ಕಾರದಿಂದ ಬಿಡುಗಡೆಯಾದ ಪ್ರತೀ ಪೈಸೆಯು ಸಾಮಾನ್ಯ ಜನರಿಗೆ ತಲುಪಬೇಕು. ಸರಕಾರ ಕೊಡುವಂತದ್ದು ಸರಕಾರದ ಹಕ್ಕು, ಭಿಕ್ಷೆ ಅಲ್ಲ ಎಂದರು.’ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಕರ್ಕೇರಾ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದ ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ಇವರು ಭಾಗವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಿಕಾ,ಮಂಗಳೂರು ಕ್ಷೇತ್ರ ಪ್ರಚಾರ ನಿರ್ದೇಶನಾಲಯದ ಉಪ ನಿರ್ದೇಶಕ ಕೆ ಪಿ ರಾಜೀವನ್, ವಲಯ ಮೇಲ್ವಿಚಾರಕಿ ಶಾರದಾ, ವಿಟ್ಲ ಪಟ್ಟಣ ಪಂಚಾಯತ್‍ನ ಎಲ್ಲಾ ಸದಸ್ಯರು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ವೇದಿಕೆಯಲ್ಲಿದ್ದರು. ರೋಹಿತ್ ಸ್ವಾಗತಿಸಿದರು. ರೋಹಿಣಿ ವಂದಿಸಿದರು. ದರ್ಶನ್ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *