ಬಂಟ್ವಾಳ ; ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ.) ಜೋಡುಮಾರ್ಗ ಬಂಟ್ವಾಳ ಇದರ 24ನೇ ವಾರ್ಷಿಕ ಮಹಾಸಭೆಯು ಭಾನುವಾರ ಬಿ.ಸಿ.ರೋಡಿನ ಲಯನ್ಸ್ ಸೇವಾಮಂದಿರದಲ್ಲಿ ನಡೆಯಿತು.
ಪುತ್ತೂರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಎಸ್.ಎನ್.ಜಗದೀಶ ಆಚಾರ್ಯ ರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವಿಶ್ವಕರ್ಮ ಸಮುದಾಯ ಸಾಮಾಜಿಕವಾಗಿ ಮತ್ತಷ್ಟು ಮುನ್ನಡೆಯನ್ನು ಸಾಧಿಸಬೇಕಾದಲ್ಲಿ ಹೆತ್ತವರು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕು. ಕೀಳರಿಮೆ ಮರೆತು, ಸರ್ಕಾರಿ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದವರ ಕರೆ ನೀಡಿದರು.

01
ವಿಶ್ವಕರ್ಮ ಸಮಾಜ ಸಏವಾ ಸಮಘ ಜೋಡುಮಾರ್ಗ ಇದರ ಅಧ್ಯಕ್ಷರಾದ ಸುಧಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ, ವಿಶ್ವಕರ್ಮ ಸಮಾಜ ಸೇವಾ ಸಂಘದ ಬೆಳ್ಳಿಹಬ್ಬ ಸಂಘದ ಸ್ವಂತ ಕಟ್ಟಡದಲ್ಲಿ ನಡೆಯುವಂತಾಗಬೇಕು. ಈ ನಿಟ್ಟಿನಲ್ಲಿ ಸಮಾಜಬಾಂಧವರೆಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದರು.
ಗೌರವಾಧ್ಯಕ್ಷ ಮನೋಜ್ ಆಚಾರ್ಯ ನಾಣ್ಯ , ಕಟ್ಟಡ ಸಮಿತಿಯ ಗೌರವಾಧ್ಯಕ್ಷರಾದ ಲೋಕೇಶ್ ಆಚಾರ್ಯ ಪೂಂಜಾಲಕಟ್ಟೆ, ವಿಶ್ವಜ್ಯೋತಿ ಮಹಿಳಾ ಮಂಡಳಿ ಯ ಅಧ್ಯಕ್ಷೆ ಪುಷ್ಪ ಡಿ. ಆಚಾರ್ಯ. ಸಂಘದ ಉಪಾದ್ಯಕ್ಶರು ಯಶೋಧರ ಆಚಾರ್ಯ, ಕಾರ್ಯದರ್ಶಿ ಸಂದೀಪ್ ಬಿ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೋಶಾಧಿಕಾರಿ ಜಯಚಂದ್ರ ಆಚಾರ್ಯ ಸರಪಾಡಿ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಜಯಪ್ರಕಾಶ್ ಆಚಾರ್ಯ ಭಂಡಾರಿಬೆಟ್ಟು ಸ್ವಾಗತಿಸಿದರು, ಮನೋಜ್ ಆಚಾರ್ಯ ವಂದಿಸಿದರು. ಅಶೋಕ್‍ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಹಾಲಿ ಆಡಳಿತ ಮಂಡಳಿಯನ್ನೇ ಮುಂದಿನ ಅವಧಿಗೆ ಮುಂದುವರಿಸುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

By suddi9

Leave a Reply

Your email address will not be published. Required fields are marked *