ಬಂಟ್ವಾಳ : ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದ ಆವರಣದಲ್ಲಿ 71ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ಯು. ಧ್ವಜಾರೋಹಣಗೈದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀ ಶರಾದ ಪ್ರಕಾಶ್ ಸಿ.ಡಿ., ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ, ವಕೀಲರು ಗಳು ಹಾಗೂ ನ್ಯಾಯಾಲಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.