ಬಂಟ್ವಾಳ: ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟವು ಜರುಗಿತು.
ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎನ್. ಶಿವಪ್ರಕಾಶ್‍ರವರು ಪಂದ್ಯಾಟವನ್ನು ಉದ್ಘಾಟಿಸಿ, ಶುಭಕೋರಿದರು. ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ.ಎಚ್. ಖಾದರ್ ಕಬಡ್ಡಿಯಲ್ಲಿ ಮಕ್ಕಳು ಜಿಲ್ಲಾ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಸ್ಪರ್ಧಿಸುವಂತಾಗಲಿ ಎಂದರು. IMG-20170906-WA0038
ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ಹಾಜಿ ಮೊಹಮ್ಮದಾಲಿ, ಕೋಶಾಧಿಕಾರಿಯಾದ ಹಾಜಿ ಬಿ.ಹೆಚ್.ಬಿ.ಸಾದಿಕ್, ಆಡಳಿತ ಮಂಡಳಿ ಸದಸ್ಯರಾದ ಇಸ್ಮಾಯಿಲ್, ಪಿ.ಟಿ.ಎ ಅಧ್ಯಕ್ಷರಾದ ಶಬೀರ್ ಅಹ್ಮದ್, ಶಾಲೆಯ ಪೂರ್ವಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಮಮತ ಸುವರ್ಣ, ವಲಯದ ವಿವಿಧ ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ತಾ| ದೈಹಿಕ ಶಿಕ್ಷಣ ಪರಿವೀಕ್ಷಕಿ ರತ್ನಾವತಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಶಾಲಾ ಮುಖ್ಯ ಶಿಕ್ಷಕಿ ಮೆಟಿಲ್ಡಾ ಡಿ’ಕೋಸ್ತಾ ಸ್ವಾಗತಿಸಿ, ಸಹ ಶಿಕ್ಷಕಿ ಮಮತ ವಂದಿಸಿದರು.

By suddi9

Leave a Reply

Your email address will not be published. Required fields are marked *