ಬಂಟ್ವಾಳ: ಬಂಟ್ವಾಳ ನಗರ ಠಾಣಾ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಪತ್ರಕರ್ತ ಇಮ್ತಿಯಾಝ್ ಶಾ ಅವರಿಗೆ ಬಂಟ್ವಾಳ ಎಸಿಜೆ ಮತ್ತು ಜೆಎಂಎಫ್‍ಸಿ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.

ಸೆ.7ರಂದು ಸಂಜೆ ಸುಮಾರು 7 ಗಂಟೆಗೆ ಅವರನ್ನು ಪೊಲೀಸರು ವಶಕ್ಕೆ ಪಡೆದು, ಸೆ.8ರಂದು ಸಂಜೆ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಐಪಿಸಿ ಕಲಂ 153(ಎ) ಮತ್ತು 505(2)ರನ್ವಯ ಪ್ರಕರಣ ದಾಖಲಿಸಲಾಗಿತ್ತು. ಇಮ್ತಿಯಾಝ್ ಬಿಡುಗಡೆಗೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸಹಿತ ಹಲವು ಸಂಘಟನೆಗಳು ಮುಖ್ಯಮಂತ್ರಿ, ಗೃಹಮಂತ್ರಿಗೆ ಮನವಿ ಅರ್ಪಿಸಿದ್ದವು. ಸೋಮವಾರ ಜಾಗೃತ ಮಾಧ್ಯಮ ಬಳಗದ ವತಿಯಿಂದ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆದಿತ್ತು.

By suddi9

Leave a Reply

Your email address will not be published. Required fields are marked *