ಸುದ್ದಿ9 ಕೈಕಂಬ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಜ್ಪೆ ಠಾಣಾ ವ್ಯಾಪ್ತಿಯ ಮಳಲಿ ಕುಕ್ಕೂರಿ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಭಾಸ್ಕರ (40) ಎಂದು ಗುರುತಿಸಲಾಗಿದೆ.

ಮನೆಯ ಪಕ್ಕಾಸಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಇವರ ಶವ ಪತ್ತೆಯಾಗಿತ್ತು. ಸ್ವಸಹಾಯ ಸಂಘದಿಂದ ಸಾಲ ತೆಗೆದು ಕಟ್ಟಲಾಗದೆ ಚಿಂತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಮಾತಾಡಿಕೊಳ್ಳುತ್ತಿದ್ದಾರೆ. ಇವರು ಕಳೆದ ವರ್ಷ ಮಂಜೇಶ್ವರದ ಯುವತಿಯೋರ್ವಳನ್ನು ಮದುವೆಯಾಗಿದ್ದರು. ಮಡದೆ ತವರು ಮನೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಬಜ್ಪೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.