ಬಂಟ್ವಾಳ: ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಮಾಸಿಕ ಕೆಡಿಪಿ ಸಭೆ ತಾ.ಪಂ.ನ ಎಸ್.ಜಿ.ಆರ್.ಎಸ್.ವೈ ಸಭಾಂಗಣದಲ್ಲಿ ನಡೆಯಿತು. 
ಪಿಲಾತಬೆಟ್ಟು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 10ಮನೆಗಳಿಗೆ ಶೌಚಾಲಯದ ವ್ಯವಸ್ಥೆ ಇಲ್ಲದಿರುವ ಬಗ್ಗೆ ಸರಕಾರಕ್ಕೆ ದೂರು ಹೋಗಿದೆ ಈ ಬಗ್ಗೆ ಕೂಡಲೇ ಕ್ರಮ ಕೈಗೋಳ್ಳಿ ಎಂದು ತಾ.ಪಂ.ಕಾರ್ಯನಿರ್ವಾಹಣಾಧಿಕಾರಿ ಸಿಪ್ರಿಯಾನ್ ಮಿರಾಂದ ಸಮಾಜ ಕಲ್ಯಾಣ ಅಧಿಕಾರಿಗೆ ಸೂಚನೆ ನೀಡಿದರು. ವೇದಿಕೆಯಲ್ಲಿ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿಸಮಿತಿ ಅಧ್ಯಕ್ಷೆ ಧನಲಕ್ಮೀ ಬಂಗೇರ, ತಹಶೀಲ್ದಾರ್ ಪುರಂದರ ಹೆಗ್ಡೆ ಉಪಸ್ಥಿತರಿದ್ದರು.