ಮಂಗಳೂರು: ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜ. 23 ರಂದು ನಗರದ ಸುರತ್ಕಲ್ ಗೋವಿಂದದಾಸ ಕಾಲೇಜಿನಲ್ಲಿ ನಡೆಯಲಿದೆ.
ಈ ಸಮ್ಮೇಳನದ ಅಂಗವಾಗಿ ತಾಲೂಕಿನ ಎಲ್ಲಾ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ಮನೆ ಮನೆಯಲ್ಲಿ ಗ್ರಂಥಾಲಯ”ಎಂಬ ವಿಷಯ ಕುರಿತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಈ ಸ್ಪರ್ಧೆಯಲ್ಲಿ ಪ್ರತಿಯೊಂದು ಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದೆ.
ಪ್ರಬಂಧವು ಕನ್ನಡ ಭಾಷೆಯಲ್ಲಿದ್ದು, ಗರಿಷ್ಠ ಮೂರು ಪುಟಗಳಿಗೆ ಸೀಮಿತವಾಗಿರಬೇಕು.
ಆಸಕ್ತ ವಿದ್ಯಾರ್ಥಿಗಳು ತಮ್ಮ ಪ್ರಬಂಧ ಬರೆದು ಜ.16 ಒಳಗೆ ಗೋವಿಂದದಾಸ ಕಾಲೇಜು, ಸುರತ್ಕಲ್– 575014 ವಿಳಾಸಕ್ಕೆ ಕಳುಹಿಸಬೇಕು ಎಂದು ಉಪ ಪ್ರಾಂಶುಪಾಲ ಪ್ರೊ.ಕೃಷ್ಣಮೂರ್ತಿಪಿ. ಪ್ರಕಟನೆಯಲ್ಲಿ ಕೋರಿದ್ದಾರೆ.