989749

ಹಾವೇರಿ:  ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕದರಮಂಡಲಗಿ ಕ್ರಾಸ್ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ  ಗುರುವಾರ ನಡೆದಿದೆ.

ಮೃತರನ್ನ ಮಲ್ಲಯ್ಯ ಭಜ್ಜಿ (28) ಹಾಗೂ ಜ್ಯೋತಿ ಭಜ್ಜಿ(25) ಎಂದು ಗುರುತಿಸಲಾಗಿದ್ದು, ಇವರು ಎರಡು ತಿಂಗಳ ಹಿಂದೆಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ.

ಈ ದಂಪತಿ ಕದರಮಂಡಲಗಿ ದೇವಸ್ಥಾನದಿಂದ ಬೈಕಿನಲ್ಲಿ ವಾಪಸ್ಸು ಬರುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಹಿಂಬದಿಂದ ಢಿಕ್ಕಿ ಈ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *