ದೊಡ್ಡಬಳ್ಳಾಪುರ: ಇಬ್ಬರು ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದಕ್ಕೆ ಪ್ರೇಮಿಗಳ ದಿನದಂದೆ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ದಾರುಣ ಘಟನೆ ತಾಲೂಕಿನ ಕಂಚಿಗನಹಾಳ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಹರೀಶ್(21) ಹತ್ಯೆಯಾದ ಯುವಕ ಎಂದು ಗುರುತಿಸಲಾಗಿದೆ.
ಹರೀಶ್ ತನ್ನ ಸ್ನೇಹಿತ ಅಂಬರೀಶ್ ಜತೆ ಗ್ರಾಮದಲ್ಲಿ ನಡದುಕೊಂಡು ಹೊಗುತ್ತಿದ್ದ ವೇಳೆ ಎದುರಿನಿಂದ ಬಂದ ಆರೋಪಿ ಸಂತೋಷ್, ಹರೀಶ್ ನ ಕತ್ತು ಮತ್ತು ಹೊಟ್ಟೆಗೆ ಚಾಕುವಿನಿಂದ ಬಲವಾಗಿ ಇರಿದು ಪರಾರಿಯಾಗಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಹರೀಶ್ ಗಂಭೀರ ಗಾಯಗೊಂಡಿದ್ದಾನೆ. ಬಳಿಕ ಸ್ಥಳೀಯರು ಆತನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
