ಬಂಟ್ವಾಳ: ಭಾರೀ ಕೋಲಾಹಲಕ್ಕೆ ಎಡೆಮಾಡಿಕೊಟ್ಟಿದ್ದ ಬಂಟ್ವಾಳ ಪುದು ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ ಪೂರ್ಣಗೊಂಡಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.
34 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 27 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ, ಬಿಜೆಪಿ ಆರು ಸ್ಥಾನಗಳನ್ನು ಜಯಿಸಿದೆ. ಅಲ್ಲದೆ, ಎಸ್ಡಿಪಿಐ ಒಂದು ಸ್ಥಾನವನ್ನು ಗೆದ್ದುಕೊಂಡಿದೆ. ಒಟ್ಟು 81 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
ಇದೀಗ ಮತ ಎಣಿಕೆ ಕಾರ್ಯ ಮುಗಿದಿದ್ದು, ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಮಿನಿ ವಿಧಾನಸೌಧದ ಮುಂಭಾಗ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು.
