ಬಂಟ್ವಾಳ : ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಯಾಗಿ ಬಿ.ಕೆ.ಇದಿನಬ್ಬ ಇವರನ್ನು ಅರಣ್ಯ ಪರಿಸರ ಹಾಗೂ ಜೀವಿಶಾಸ್ತ್ರ ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ರವರ ನಿರ್ದೇಶನದಂತೆ ದ.ಕ.ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ರವರು ನೇಮಕ ಮಾಡಿರುತ್ತಾರೆ.

ಇವರು ತಾ.ಭೂನ್ಯಾಯಮಂಡಳಿ ಮಾಜಿ ಸದಸ್ಯರಾಗಿ, ದ.ಕ.ಜಿಲ್ಲಾ ಮುಸ್ಲಿಂ ಕಮಿಟಿಯ ಸದಸ್ಯರಾಗಿ, ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ರಾಜ್ಯ ನಿರ್ದೇಶಕರಾಗಿ ಮತ್ತು ದ.ಕ.ಜಿಲ್ಲಾ ಟೆಲಿಕಾಂ ಬೋರ್ಡಿನ ಸದಸ್ಯರಾಗಿ ಸೇವೆ ಸಲ್ಲಿಸಿರುತ್ತಾರೆ.