ಕೈಕಂಬ: ಕುಡಪು ಶ್ರೀ ಕ್ಷೇತ್ರ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದಂಗವಾಗಿ ಫೆ. 22ರಂದು ಮೂಡಬಿದ್ರಿ, ಕೈಕಂಬ, ಗುರುಪುರ, ವಾಮಂಜೂರು ಹಾಗೂ ಸುತ್ತಲ ಪ್ರದೇಶದ ದೇವಸ್ಥಾನಗಳ ಮೂಲಕ ಇಂದು ಕುಡುಪು ದೇವಳಕ್ಕೆ ಹಸಿರುವಾಣಿ ಹೊರೆ ಕಾಣಿಕೆಯ ಹೊಳೆಯೇ ಹರಿದು ಬಂತು.gur-feb-22-horekanike-5

ವಾಮಂಜೂರಿನ ಶ್ರೀ ರಾಮ ಭಜನಾ ಮಂದಿರಲ್ಲಿ ಹೊರೆಕಾಣಿಕೆ ಮೆರವಣಿಗೆಗೆ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮಿ ದೀಪ ಬೆಳಗಿಸಿ ಚಾಲನೆ ನೀಡಿದರು.gur-feb-22-horekanike-3

ಈ ಸಂದರ್ಭದಲ್ಲಿ ಗುರುಪುರ ವೈದ್ಯನಾಥೇಶ್ವರ ದೈವಸ್ಥಾನದ ಆಡಳಿತ ಮೊಕ್ತೇಸರ ಪ್ರಮೋದ್ ರೈ, ಮಂಜುನಾಥ ಭಂಡಾರಿ ಮೂಡುಶೆಡ್ಡೆ, ಜಗದೀಶ ಶೇಣವ, ಶರಣ್ ಪಂಪ್ವೆಲ್, ಹೊರೆ ಕಾಣಿಕೆ ಸಮಿತಿಯ ಪ್ರಮುಖ ಮಹಾಬಲ ಪೂಜಾರಿ ಕಡಂಬೋಡಿ, ಡಾ. ರವಿರಾಜ ಶೆಟ್ಟಿ, ವಿನೋದ ಮಾಡ, ಓಂ ಪ್ರಕಾಶ್, ಚಂದ್ರಹಾಸ ಶೆಟ್ಟಿ, ವಿಷ್ಣು ಕಾಮತ್, ಭಾಸ್ಕರ ಕೆ, ವಾಸುದೇವ ಭಟ್, ಸುದರ್ಶನ ಕುಡುಪು, ಗಣೇಶದಾಸ್ ಶರವು, ರಾಜೇಶ್ ಕೊಟ್ಟಾರಿ, ಹರಿ ಭಟ್, ರಾಮ್ ಭಟ್, ಗಣೇಶ್ ಭಟ್ ಹಾಗೂ ಹೊರೆಕಾಣಿಕೆ ಮತ್ತು ಬ್ರಹ್ಮಕಲಶೋತ್ಸವ ಸಮಿತಿ-ಉಪಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮೂಡಬಿದ್ರೆ, ಗಂಜಿಮಠ, ಮಿಜಾರು, ಕೈಕಂಬ, ಮಣೇಲ್, ಬಜ್ಪೆ, ಕಿನ್ನಿಕಂಬಳ, ಗುರುಪುರ ಶ್ರೀ ವರದರಾಜ ವೆಂಕಟರಮಣ ದೇವಸ್ಥಾನ ಮತ್ತು ಶ್ರೀವೈದ್ಯನಾಥ ದೈವಸ್ಥಾನದಲ್ಲಿ ಸಂಗ್ರಹವಾದ ಹೊರೆಕಾಣಿಕೆ ವಾಹನಗಳು ವಾಮಂಜೂರಿಗೆ ಸಾಗಿ, ಅಲ್ಲಿಂದ ಮುಂದಕ್ಕೆ ಭವ್ಯ ಮೆರವಣಿಯಿಂದ ಕುಡುಪಿನತ್ತ ಸಾಗಿದವು.0004

ಮೂಡುಶೆಡ್ಡೆ ಕಡೆಯಿಂದ ವಾಮಂಜೂರು ಮಾರ್ಗದಲ್ಲಿ ಹೊರೆಕಾಣಿಕೆ ಹೊತ್ತ ನೂರಾರು ವಾಹನಗಳು ಸಾಲಾಗಿ ಕುಡುಪಿನತ್ತ ಸಾಗಿದವು. ಮೆರವಣಿಗೆಯಲ್ಲಿ ಚೆಂಡೆ ನಾದ, ಭಜನೆ ನಿನಾದ ಹಾಗೂ ಭಕ್ತ ಸಮುದಾಯದ ಜೈಕಾರ ಮುಗಿಲು ಮುಟ್ಟುವಂತಿತ್ತು. ಎಲ್ಲಿ ನೋಡಿದರಲ್ಲಿ ಭಗವಧ್ವಜ ರಾರಾಜಿಸುತ್ತಿದ್ದವು. ಕೇಸರಿ ಸೀರೆ ಉಟ್ಟ ನೂರಾರು ಮಹಿಳೆಯರು ಭಜನೆಯೊಂದಿಗೆ ಮುಂದೆ ಸಾಗಿದರೆ ಬೊಂಬೆ ಕುಣಿತ, ತಾಸೆ, ಡೋಲು, ಕೊಂಬಿನ ನಾದ ಮೆರವಣಿಗೆಯಲ್ಲಿ ಸಾಗಿ ಬಂದ ಭಕ್ತರನ್ನು ಭಾವ ಪರವಶರಾಗುವಂತೆ ಮಾಡಿತು.

gur-feb-22-vaidyanatha daivstana

gur-feb-22-horekanike-4

ಮೆರವಣಿಗೆ ಸಾಗಿ ಬಂದ ದಾರಿಯುದ್ದಕ್ಕೂ ಪೊಲೀಸರು ಇತರ ವಾಹನಗಳ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿದರು. ಆದರೆ ಕೆಲವು ಕಡೆ ಸ್ವಲ್ಪ ಮಟ್ಟಿಗೆ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸಾವಿರಾರು ಭಕ್ತರು ಪಾಲ್ಗೊಂಡಿದ್ದ ಈ ಮೆರವಣಿಗೆ ವಾಮಂಜೂರು ಸರ್ಕಲಿನಿಂದ ಬಹಳಷ್ಟು ಶಾಂತ ರೀತಿಯಲ್ಲಿ ಕುಡುಪು ತಲುಪುತ್ತಲೇ, ದೇವಸ್ಥಾನದ ಆಡಳಿತ ಮಂಡಳಿಯಿಂದ ಭವ್ಯ ಸ್ವಾಗತ ಕಾದಿತ್ತು.gur-feb-22-horekanike-2

ಮಂಗಳೂರು, ಸುರತ್ಕಲ್ ಮೊದಲಾದ ಕಡೆಗಳ ಹೊರೆಕಾಣಿಕೆ ಈಗಾಗಲೇ ದೇವಸ್ಥಾನಕ್ಕೆ ಆಗಮಿಸಿದ್ದು, ಮೂಡಬಿದ್ರೆ ಮತ್ತು ವಾಮಂಜೂರು ಹಾಗೂ ಸುತ್ತಲ ಪ್ರದೇಶದಿಂದ ಗುರುವಾರ  ಹೊರೆಕಾಣಿಕೆ ಕುಡುಪಿಗೆ ಅದ್ದೂರಿ ಮೆರವಣಿಗೆ ಮೂಲಕ ಬಂತು. ಲಾರಿಗಳಲ್ಲಿ ಸೀಯಾಳ, ತೆಂಗಿನಕಾಯಿ, ತರಕಾರಿ, ಅಕ್ಕಿ ಮೊದಲಾದ ಧಾನ್ಯ-ಜೀನಸು ಪದಾರ್ಥಗಳು ತುಂಬಿದ್ದವು.001

002ದೇವಸ್ಥಾನದ ಹೊರೆಕಾಣಿಕೆ ಉಗ್ರಾಣದಲ್ಲಿ ಅಕ್ಕಿ ಮೂಟೆಗಳು, ಬೆಲ್ಲದ ಅಚ್ಚುಗಳು, ಪಾತ್ರೆಪರಡಿ, ತರಕಾರಿ, ಹಣ್ಣು.. ನಾನಾ ರೀತಿಯ ಅಗತ್ಯ ಸೊತ್ತುಗಳು ತುಂಬಿ ತುಳುಕುತ್ತಿವೆ. ಶತಮಾನದ ಇತಿಹಾಸವುಳ್ಳ ಕುಡುಪು ದೇವಾಲಯದ ಬ್ರಹ್ಮ ಕಲಶೋತ್ಸವಕ್ಕೆ ಭಕ್ತ ಜನರು ಎಲ್ಲ ರೀತಿಯಿಂದಲೂ ಕಾಣಿಕೆ ನೀಡಿರುವುದು ಹೊರೆಕಾಣಿಕೆ ಉಗ್ರಾಣವನ್ನೊಮ್ಮೆ ವೀಕ್ಷಿಸಿದರೆ ವೇದ್ಯವಾಗುತ್ತದೆ.gur-feb-22-horekanike-1

  ವೀಡಿಯೋ ನೋಡಲು  ಇಲ್ಲಿ ಕ್ಲಿಕ್ ಮಾಡಿ ಹೊರೆಕಾಣಿಕೆಯ ಮೆರವಣಿಗೆ>>>

By suddi9

Leave a Reply

Your email address will not be published. Required fields are marked *