ಚಿಕ್ಕೋಡಿ: ಜಿಲ್ಲಾ ಕೇಂದ್ರ ರಚೆನೆಗೆ ಆಗ್ರಹಿಸಿ ಶುಕ್ರವಾರ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಬಂದ್ ಕರೆ ನೀಡಲಾಗಿದೆ.
ಬಂದ್ ಹಿನ್ನಲೆ ನಗರದ ಶಾಲೆ ಕಾಲೇಜುಗಳಿಗೆ ರೆಜೆ ಘೋಷಿಸಲಾಗಿದ್ದು, ಬಸ್ ಸಂಚಾರ ಕೂಡ ಸ್ಥಗಿತಗೊಳಿಸಲಾಗಿದೆ.
ವಿವಿಧ ಸಂಘಟನೆಗಳು ಬಂದ್ ಕರೆಗೆ ಬೆಂಬಲ ವ್ಯಕ್ತಪಡಿಸಿದ್ದು, ಅಂಗಡಿ ಮುಗ್ಗಟ್ಟುಗಳು, ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಚಿಕ್ಕೋಡಿ ಜಿಲ್ಲಾ ಕೇಂದ್ರ ರಚನೆಗೆ ಒತ್ತಾಯಿಸುತ್ತಿದ್ದಾರೆ.
ಬಸ್ ಸಂಚಾರ ಸ್ಥಗಿತಗೊಳಿಸಿದ್ದರಿಂದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ.
