ಮಂಗಳೂರು: ಗಲ್ಫ್ ಗೈಸ್ ಸೆಂಟ್ರಲ್ ಕಮಿಟಿ ಮಲ್ಲೂರು ಇದರ ಪ್ರಥಮ ವಾರ್ಷಿಕೋತ್ಸವ ಅಂಗವಾಗಿ ಸೌಹಾರ್ದ ಸಂಗಮ ಹಾಗೂ ಮದ್ರಸ ವಿದ್ಯಾರ್ಥಿಗಳ ಪ್ರತಿಭಾನ್ವೇಷಣಾ ಸ್ಪರ್ಧಾ ಕಾರ್ಯಕ್ರಮ ಫೆ. 24 ರಂದು ಮಲ್ಲೂರು-ಬದ್ರಿಯಾ ನಗರ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ.ಎ. ಶರೀಫ್ ಮಲ್ಲೂರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು 7ಕ್ಕೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ ಸಚಿವ ಯು.ಟಿ. ಖಾದರ್, ಶಾಸಕ ಬಿ.ಎ. ಮೊಯಿದ್ದೀನ್ ಬಾವಾ, ಮಂಗಳೂರು ತಾ.ಪಂ. ಅಧ್ಯಕ್ಷ ಮೊಹಮ್ಮದ್ ಮೋನು, ಮಲ್ಲೂರು ಗ್ರಾ.ಪಂ. ಅಧ್ಯಕ್ಷ ಎಂ.ಕೆ. ಯೂಸುಫ್, ಪ್ರಕಾಶ್ ಆಳ್ವ ಮಲ್ಲೂರು ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಎಂ.ಕೆ. ಆದಂ ಪಾದೆ, ಉಮ್ಮರ್ ಫಾರೂಕ್ ಬೊಲ್ಲಂಕಿಣಿ, ಎನ್.ಎ. ಸತ್ತಾರ್, ಉಸ್ಮಾನ್ ಬದ್ರಿಯಾ ನಗರ ಮತ್ತಿತರರು ಉಪಸ್ಥಿತರಿದ್ದರು.
