ಬೆಳಗಾವಿ : ಉತ್ತರ ಕರ್ನಾಟಕದಲ್ಲಿ ಇಂದಿನಿಂದ ನಡೆಯಲಿರುವ ಎರಡನೇ ಹಂತದ ಜನಾಶೀರ್ವಾದ ಯಾತ್ರೆ ಹಿನ್ನೆಲೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿಯನ್ನು ಕೈ ನಾಯಕರು ಸ್ವಾಗತ ಮಾಡಿಕೊಂಡರು. ನಂತರ ರಾಹುಲ್ ಗಾಂಧಿ ಬೆಳಗಾವಿಯಿಂದ ಅಥಣಿಗೆ ಪ್ರವಾಸ ಬೆಳೆಸಿದ್ದಾರೆ. ಇದೇ ವೇಳೆ ರಾಹುಲ್ ಗಾಂಧಿ ಅವರು ನಿಗದಿತ ಸಮಯಕ್ಕಿಂತ ಒಂದು ಗಂಟೆ ತಡವಾಗಿ ರಾಹುಲ್ ಆಗಮಿಸಿದ ಹಿನ್ನೆಲೆ ಅವರ ಸ್ವಾಗತಕ್ಕೆ ನಿಂತಿದ್ದ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಕಾದು ಕಾದು ಸುಸ್ತಾದರು.
ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ರಾಹುಲ್ರನ್ನು ಸ್ವಾಗತಿಸುವ ವೇಳೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಇಂಧನ ಸಚಿವ ಡಿ.ಕೆ. ಶಿವಕುಮಾರ್ ಸಾಥ್ ನೀಡಿದರು.
