ತುಮಕೂರು: ನಗರದಲ್ಲಿ ಯುವಕರು ಬೈಕ್ ವ್ಹಿಲಿಂಗ್ ಮಾಡುತ್ತಾ ವಿವಿಧ ಬಡಾವಣೆ ನಿವಾಸಿಗಳ ನಿದ್ದೆಗೆಡಿಸಿದ್ದ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಬೈಕ್ ಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಕಳೆದ ರಾತ್ರಿ ದರ್ಗಾ ಜೋಡಿ ರಸ್ತೆಯಲ್ಲಿ ಫಾರುಖ್ (23), ಸಲ್ಮಾನ್ (20), ಶಮೀರ್ (19) ಇವರು ರಾತ್ರಿ ಬೈಕ್ ವ್ಹೀಲಿಂಗ್ ಮಾಡುತ್ತಾ ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆದು ಸಾರ್ವಜನಿಕರ ನಿದ್ದೆಗೆಡಿಸಿದ್ದರು. ಇದರಿಂದ ಸಿಟ್ಟಿಗೆದ್ದ ಸಾರ್ವಜನಿಕರು ಮೂವರು ಯುವಕರನ್ನು ಥಳಿಸಿ ಬೆಂಕಿ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಬೈಕ್ ವ್ಹೀಲಿಂಗ್ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಪೊಲೀಸರು ನಗರದ ವಿವಿಧೆಡೆ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಹಲವರನ್ನು ಬಂಧಿಸಿದ್ದರು.
