ಬೆಂಗಳೂರು : ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಬುಧವಾರ ಬೆಳಗ್ಗೆ ನ್ಯಾಯಾಲಯದ ಆವರಣದಲ್ಲೇ ವ್ಯಕ್ತಿಯೊಬ್ಬರು ಚೂರಿಯಿಂದ ಇರಿದ ಘಟನೆ ಬುಧವಾರ ನಡೆದಿದೆ.40bb4073d1238e30b0a3b74a6d9d7fa2

ಬೆಂಗಳೂರಿನಲೋಕಾಯುಕ್ತ ನ್ಯಾಯಾಲಯದಲ್ಲಿ  ಮಧ್ಯಾಹ್ನ 1.45 ಮಧ್ಯೆ ದುರ್ಘಟನೆ ನಡೆದಿದ್ದು  ಲೋಕಾಯುಕ್ತ ಕಚೇರಿಗೆ ದೂರು ನೀಡಲು ಬಂದಿದ್ದ ತೇಜಸ್ ಶರ್ಮಾ ಎಂಬ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.  ಚಾಕುವಿನಲ್ಲಿ  ಒಟ್ಟು ಮೂರು ಬಾರಿ ವಿಶ್ವನಾಥ್ ಶೆಟ್ಟಿ ಅವರಿಗೆ ಚುಚ್ಚಿ, ಪರಾರಿಯಾಗಲು ಯತ್ನಿಸಿದ್ದಾನೆ ಆದರೆ ಕೂಡಲೇ ಅವನನ್ನು ಹಿಡಿದು ಪೊಲೀಸರು ಬಂಧಿಸಿದ್ದಾರೆ.

ನ್ಯಾ.ವಿಶ್ವನಾಥ್ ಶೆಟ್ಟಿ ಅವರನ್ನು ಸಮೀಪದ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆ, ಎದೆ ಭಾಗಕ್ಕೆ ತೀವ್ರ ತರದ ಗಾಯವಾಗಿದೆ. ವಿಶ್ವನಾಥ್ ಶೆಟ್ಟಿ ಅವರ ಸ್ಥಿತಿ ಗಂಭೀರವಾಗಿದೆ, ಆದರೆ, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ..

By suddi9

Leave a Reply

Your email address will not be published. Required fields are marked *