Image result for ಆಯುಕ್ತ ಸುರೇಶ್

ಮಂಗಳೂರು: ನಗರದಲ್ಲಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೆ ನೋಟಿಸ್ ನೀಡುವುದಿಲ್ಲ. ಬದಲಾಗಿ ಕೇಸು ದಾಖಲಿಸಿ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ಟಿ.ಆರ್ ಸುರೇಶ್  ಖಡಕ್ ಎಚ್ಚರಿಕೆ ನೀಡಿದ್ದಾರೆ.

ನಗರದ ಕಮಿಷನರ್ ಕಚೇರಿಯಲ್ಲಿ ಆಯೋಜಿಸಿದ್ದ ‘ಫೋನ್ ಇನ್’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿಟಿ ಬಸ್ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ಮಾತನಾಡುವಾಗ ಸೂಕ್ತವಾಗಿ ಸ್ಪಂದಿಸುವುದಿಲ್ಲ. ಕೆಲವು ಬಸ್ಸುಗಳಲ್ಲಿ ಟಿಕೆಟ್ ನೀಡಲ್ಲ. ಬಸ್ ಸಿಬ್ಬಂದಿಗಳು ಪ್ರಯಾಣಿಕರೊಂದಿಗೆ ಉಡಾಫೆಯಿಂದ ವರ್ತಿಸುತ್ತಾರೆ. ಪಾರ್ಕಿಂಗ್ ವ್ಯವಸ್ಥೆಯಿದ್ದರೂ ವಾಹನ ನಿಲುಗಡೆ ಸರಿಯಾಗಿ ಮಾಡುವುದಿಲ್ಲ ಇದಕ್ಕೆ ಅತೀ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು  ಎಂದು ತಿಳಿಸಿದರು.

 

By suddi9

Leave a Reply

Your email address will not be published. Required fields are marked *