
ಕೋಲಾರ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೊಗುವ ಕಾರಿಗೆ ಖಾಸಗಿ ಬಸ್ವೊಂದು ಢಿಕ್ಕಿ ಹೊಡೆದು ಕಾರಿನಲ್ಲಿದ್ದ ಕೇರಳ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಲಾರಿಯೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ, ಕೋಲಾರದ ಗಡಿ, ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಬಂಗಾರುಪಾಳ್ಯಂ ಬಳಿ ಈ ಘಟನೆ ನಡೆದಿದ್ದು ಇವರು ಕಾಸರಗೋಡಿನಿಂದ ತಿರುಪತಿಗೆ ಹೋಗುತ್ತಿದ್ದರು ಎನ್ನಲಾಗಿದೆ.
ಗಾಯಾಳುಗಳಿಗೆ ಬಂಗಾರುಪಾಳ್ಯಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.