Image result for ಖರ್ಗೆಗೆ

ಕಲಬುರಗಿ: ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ.

ಒಂದೂವರೆ ತಿಂಗಳಿಂದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಖರ್ಗೆ ಅವರಿಗೆ ಬೆದರಿಕೆ ಕರೆ ಬರುತ್ತಿದ್ದು, ದೆಹಲಿಯ ತುಘಲಕ್ ಠಾಣೆ ಪೊಲೀಸರಿಗೆ ಅವರು ದೂರು ನೀಡಿದ್ದಾರೆ. ಈಗಾಗಲೇ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಕಲಬುರಗಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಖರ್ಗೆ, ತಮಗೆ ಜೀವ ಬೆದರಿಕೆ ಕರೆ ಬರುತ್ತಿವೆ. ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್, ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ಮಾಹಿತಿ ನೀಡಿದ್ದೇನೆ. ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಹೇಳಿದ್ದಾರೆ.

By suddi9

Leave a Reply

Your email address will not be published. Required fields are marked *