Image result for ರಾಹುಲ್‍ಗಾಂಧಿ

ಚಿಕ್ಕಮಗಳೂರು: ರಾಹುಲ್‍ಗಾಂಧಿ ಮಾ.19 , 20ರಂದು ಮಂಗಳೂರು, ಉಡುಪಿ ಪ್ರವಾಸ ನಡೆಸಲಿದ್ದು, ಮಾ.21ರಂದು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ಬರಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ವಿಷ್ಣುನಂದನ್ ತಿಳಿಸಿದ್ದಾರೆ.

 ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾ.21ರಂದು ಚಿಕ್ಕಮಗಳೂರು ಪ್ರವಾಸ ಕೈಗೊಳ್ಳಲಿದ್ದು, ಅಂದು ಶೃಂಗೇರಿ ಚಿಕ್ಕಮಗಳೂರು, ಕಡೂರು, ತರೀಕೆರೆಯಲ್ಲಿ ನಡೆಯಲಿರುವ ಜನಾಶೀರ್ವಾದ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಶೃಂಗೇರಿ ಶಾರದಾಂಬೆ ದೇವಾಲಯದಲ್ಲಿ ಪೂಜೆಯ ಬಳಿಕ ಜನಾಶೀರ್ವಾದ ಯಾತ್ರೆಯ ಮೂಲಕ ಚಿಕ್ಕಮಗಳೂರಿಗೆ ಆಗಮಿಸಿ ನಗರದ ಸುಭಾಷ್‍ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ನಡೆಯುವ ಜನಾಶೀರ್ವಾದ ಸಮಾವೇಶದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಹಾಸನಕ್ಕೆ ತೆರಳಲಿದ್ದಾರೆಂದು ಅವರು ತಿಳಿಸಿದರು.

By suddi9

Leave a Reply

Your email address will not be published. Required fields are marked *