HVR-DEATH-1000x544

ಹಾವೇರಿ: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ನಾಗನೂರು ಕೆರೆಯಲ್ಲಿ ನಡೆದಿದೆ.

ಮೃತ ಬಾಲಕರನ್ನು ಪಟ್ಟಣದ ಮೌಲಾಲಿ ಬಡಾವಣೆಯ ನಿವಾಸಿಗಳಾದ ಸಾಹಿಲ್ (14) ಮತ್ತು ಖಾಜಾ ಮಂತ್ರೋಡಿ(14) ಎಂದು ಗುರುತಿಸಲಾಗಿದೆ.

ಸೈಕಲ್ ಮೇಲೆ ಕೆರೆಗೆ ಈಜಲು ತೆರಳಿದ್ದರು, ಈ ವೇಳೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಅಗ್ನಿಶಾಮಕ ದಳ ಸಿಬ್ಬಂದಿ ಕೆರೆಯಲ್ಲಿ ಶೋಧಕಾರ್ಯ ನಡೆಸಿ ಮೃತ ದೇಹಗಳನ್ನ ಹೊರತೆಗಿದ್ದಾರೆ. ತಾಲೂಕು ಆಸ್ಪತ್ರೆಗೆ ಶಾಸಕ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

ಸ್ಥಳಕ್ಕೆ ಶಿಗ್ಗಾಂವಿ ಠಾಣೆ ಪಿಎಸ್ಸೈ ಅನ್ನಪೂರ್ಣ ಹುಲಗೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

 

By suddi9

Leave a Reply

Your email address will not be published. Required fields are marked *