91da27ef373b1bb9df1a2aa76efe5bb2

ಬೆಂಗಳೂರು: ಸೋಷಿಯಲ್ ಮೀಡಿಯಾದ ಮೂಲಕವೂ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಜನರಿಗೆ ಹತ್ತಿರವಾಗಿದ್ದು, ತಮ್ಮ ಟ್ವಿಟರ್ ಖಾತೆಯಲ್ಲಿ ನಾಳೆ ಸಂಜೆ 5 ಗಂಟೆಗೆ ಬ್ರೇಕಿಂಗ್ ನ್ಯೂಸ್ ನೀಡುವುದಾಗಿ ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಯಾವ ಬಾಂಬ್ ಸಿಡಿಸ್ತಾರೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ. ರಾಜ್ಯ ಸರ್ಕಾರದ ವಿರುದ್ಧ ಅಥವಾ ಸಚಿವರ ವಿರುದ್ಧ ಏನಾದ್ರೂ ಬಾಂಬ್ ಸಿಡಿಸುತ್ತಾರೆಯೇ ಎಂಬುದನ್ನು ಕಾದುನೋಡಬೇಕಿದೆ. ಆದರೆ, ಯಡಿಯೂರಪ್ಪ ಬ್ರೇಕಿಂಗ್ ನ್ಯೂಸ್ ನೀಡಿರುವುದರ ಹಿಂದೆ ಹೊಸ ರೀತಿಯ ಕ್ಯಾಂಪೇನ್ ಇರಬಹುದೆಂದು ಹೇಳಲಾಗ್ತಿದೆ.

ಯಡಿಯೂರಪ್ಪ ನಾಳೆ ಬ್ರೇಕಿಂಗ್ ನ್ಯೂಸ್ ನೀಡುವುದಾಗಿ ಹೇಳಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

By suddi9

Leave a Reply

Your email address will not be published. Required fields are marked *