ಹಾಸನ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಬಳಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಡಾಬಾ ಮಾಲಕ ನಾಗೇಶ್(40) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ.
ನಾಗೇಶ್ ಅವರು ಹಿರೀಸಾವೆಯಿಂದ ಡಾಬಾ ಕಡೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬೆಂಗಳೂರು ಕಡೆಯಿಂದ ಬಂದ ಕಾರು ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಹಿರೀಸಾವೆ ಪೋಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
