ಬಂಟ್ವಾಳ: ಕಾಲೇಜು ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಸಮೀಪದ ವಾಮದಪವಿನಲ್ಲಿರುವ ಸರ್ಕಾರಿ ಹಾಸ್ಟೆಲ್ ನಲ್ಲಿ ನಡೆದಿದೆ.
ಅಂತಿಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ, ಸಕಲೇಶಪುರ ಮೂಲದ ಚಂದ್ರಶೇಖರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಪೂಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
