ಮಂಗಳೂರು: ಕೈರಂಗಳದಲ್ಲಿ ನಡೆದ ಪ್ರತಿಭಟನೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಧರ್ಮವಿರೋಧಿ ಭಾಷಣ ಮಾಡಿದ್ದಾರೆ ಎಂದು ಆಪಾದಿಸಿ ಕೋಣಾಜೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.
ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಧರ್ಮ ವಿರೋಧಿ ಬಾಷಣ ಮಾಡಿ, ಚುನಾವಣಾ ಆಯೋಗ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಸಾರ್ವಜನಿಕರಲ್ಲಿ ಗೊಂದಲ ಮತ್ತು ಅನುಮಾನ ಹುಟ್ಟಿಸುವಂತೆ ಉದ್ರೇಕಕಾರಿ ಭಾಷಣ ಮಾಡಿ, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆಪಾದಿಸಲಾಗಿದೆ. ಸಭೆಗೆ ಚುನಾವಣಾ ಆಯೋಗದ ಅನುಮತಿಯನ್ನು ಪಡೆಯಲಾಗಿಲ್ಲ ಎಂದು ದೂರಲಾಗಿದೆ.
