ಸುದ್ದಿ9ಕೈಕಂಬ: ಕಥೋಲಿಕ್ ಸಭಾ ಮಂಗಳೂರು ಪ್ರದೇಶ ಪೊಂಪೈ ಮಾತೆಯ ದೇವಾಲಯ ಗುರುಪುರ ಘಟಕ ಇದರ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ-2014 ಕಾರ್ಯಕ್ರಮ ನಡೆಯಲಿದೆ.
2013-14ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ., ಪಿ.ಯು.ಸಿ ಕಾಲೇಜ್ ಹಾಗೂ ವೃತ್ತಿಪರ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನಗೈದ ವಿದ್ಯಾರ್ಥಿಗಳನ್ನು ಸಾರ್ವಜನಿಕವಾಗಿ ಸನ್ಮಾನಿಸಿ ಅಭಿನಂದಿಸುವ ಕಾರ್ಯಕ್ರಮವು ಆ .24 ಆದಿತ್ಯವಾರ ಮಧ್ಯಾಹ್ನ 3 ಗಂಟೆಗೆ ಪೊಂಪೈ ಸಭಾಭವನದಲ್ಲಿ ನಡೆಯಲಿದೆ.
ಅಧ್ಯಕ್ಷತೆಯನ್ನು ಪೊಂಪೈ ಮಾತೆಯ ದೇವಾಲಯದ ಧರ್ಮಗುರುಗಳಾದ ವಂ.ಗ್ರೇಗರಿ ಸೆರಾವೊ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಖ್ಯೋಪಾಧ್ಯಾಯರು ಸರಕಾರಿ ಪ್ರೌಢ ಶಾಲೆ ಕಿನ್ನಿಕಂಬಳ ಇದರ ಮುಖ್ಯ ಶಿಕ್ಷಕಿ ತಾರಾ ಲವಿನಾ ಫೆರ್ನಾಂ ಡಿಸ್, ಕೈಕಂಬ ಪೊಂಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಹೇಶ್ ಶೆಟ್ಟಿ ಉಪಸ್ಥಿತಲಿರುವರು ಎಂದು ಪ್ರಕಟನೆ ತಿಳಿಸಿದೆ.