ಮಂಗಳೂರು: ದುಷ್ಕರ್ಮಿಗಳ ತಂಡವೊಂದು ಮದ್ರಸಕ್ಕೆ ಕಲ್ಲು ತೂರಾಟ ನಡೆಸಿದ ಪರಾರಿಯಾದ ಘಟನೆ ನಗರದ ಕೊಣಾಜೆ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ಕೊಲ್ಲರಕೋಡಿ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ದುಷ್ಕೃತ್ಯ ನಡೆದ ಕೂಡಲೇ ವಿಷಯ ಅರಿತು ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಮುಂದುವರಿಸಿದ್ದಾರೆ.
ಇದೀಗ ಪ್ರಕರಣಕ್ಕೆ ಸಂಬಂಧಿಸಿ ದುಷ್ಕರ್ಮಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗುತ್ತಿದ್ದು, ಕೊಣಾಜೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
