kumaraswamy-oath

ಬೆಂಗಳೂರು: ರಾಜ್ಯದ 25ನೇ ಮಂತ್ರಿಯಾಗಿ ಎಚ್.ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ವಿಧಾಸೌಧದ ಎದುರು ಕನ್ನಡ ನಾಡಿನ ಜನತೆ ಹೆಸರಿನಲ್ಲಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಸಂಜೆ 4.30ಕ್ಕೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕುಮಾರಸ್ವಾಮಿ ಅವರಿಗೆ ರಾಜ್ಯಪಾಲ ವಿ.ಆರ್.ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಕಾಂಗ್ರೆಸ್ ಜತೆ ಸೇರಿ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಲಿರುವ ಕುಮಾರಸ್ವಾಮಿ ಎರಡು ಬಾರಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ದಾಖಲೆ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಯುಪಿಎ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಎಸ್ ಪಿ ನಾಯಕಿ ಮಾಯಾವತಿ, ಎಸ್ಪಿ ನಾಯಕ ಅಖಿಲೇಶ್ ಯಾದವ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಕೇರಳ ಸಿಎಂ ಪಿಣರಾಯಿ ವಿಜಯನ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ರಾಮಲಿಂಗಾ ರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.

ಇದಲ್ಲದೇ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿ ತಮ್ಮ ನೆಚ್ಚಿನ ಪಕ್ಷದ ನಾಯಕರ ಪದಗ್ರಹಣಕ್ಕೆ ಸಾಕ್ಷಿಯಾದರು.

 

By suddi9

Leave a Reply

Your email address will not be published. Required fields are marked *