ಸುದ್ದಿ9ಬಂಟ್ವಾಳ: ಬ್ರಹ್ಮರಕೋಟ್ಲು ಟೋಲ್ ಸಂಗ್ರಹ ಕೇಂದ್ರದ ಸಿಬ್ಬಂದಿಯೊಬ್ಬರಿಗೆ ಕಳೆದ ಭಾನುವಾರ ಬೈಕಿನಲ್ಲಿ ಬಂದ ಅಪರಿಚಿತರ ತಂಡ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ಓರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಪುದು ನಿವಾಸಿ ಅಬೂಬಕ್ಕರ್ ಸಿದ್ದಿಕ್ ಬಂಧಿತ ಆರೋಪಿಯಾಗಿದ್ದಾನೆ.ಈತನನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅಗಸ್ಟ್ 17ರಂದು.ಬಿ.ಸಿ.ರೋಡಿನಿಂದ ಫರಂಗಿಪೇಟೆ ಕಡೆಗೆ ಎರಡು ಬೈಕಿನಲ್ಲಿ ತೆರಳುತ್ತಿದ್ದ ಸವಾರರು ಏಕಾಏಕಿಯಾಗಿ ಟೋಲ್ ಸಿಬ್ಬಂದಿ ರವಿರಾಜ್ ಎಂಬವರಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿರುವ ಇನ್ನಿಬ್ಬರಿಗಾಗಿ ಶೋಧಕಾರ್ಯ ಮುಂದುವರಿದಿದೆ.

By suddi9

Leave a Reply

Your email address will not be published. Required fields are marked *